ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ.

ಕೊಡಗಿನ ಅಬ್ದುಲ್ ರೆಹಮಾನ್ ಕೇರಳದಲ್ಲಿ ಎನ್.ಐ.ಎ ಬಲೆಗೆ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎನ್.ಐ.ಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್‌ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ. ಎಲ್ಲಾ ಆರೋಪಿಗಳಿಗಾಗಿ ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.



