ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಲಾರಿ ಹಾಗೂ ಈಚರ್ ನಡುವೆ ಮುಖಾಮುಖಿ ಢಿಕ್ಕಿ..!!

ಉಪ್ಪಿನಂಗಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಲಾರಿ ಹಾಗೂ ಈಚರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈಚರ್ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡ ಈಚರ್ ವಾಹನದ ಚಾಲಕನನ್ನು ಚನ್ನರಾಯಪಟ್ಟಣ ತಾಲೂಕಿನ ನವಿಲುಹೂಸೂರು ಗ್ರಾಮದ ನಿವಾಸಿ 48 ವರ್ಷದ ನಟರಾಜ್ ಎಂದು ಗುರುತಿಸಲಾಗಿದೆ. ಘಟನೆಯಿಂದ ನಜ್ಜುಗುಜ್ಜಾದ ಈಚರ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಪ್ರಯಾಸದಿಂದ ಹೊರತೆಗೆಯಲಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಲಾರಿ ಚಾಲಕ ಹಾಸನದ ಆಲೂರು ಮೂಲದ 26 ವರ್ಷದ ಶಶಿ ಎಂಬವರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿ0ದ ಬೆಂಗಳೂರಿಗೆ ಪ್ಲಾಸ್ಟಿಕ್ ಮಣಿ ಸಾಗಿಸುತ್ತಿದ್ದ ಈಚರ್ ಲಾರಿ ಬರ್ಚಿನಹಳ್ಳ ತಲುಪುತ್ತಿದ್ದಂತೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.ಘಟನೆಯಿಂದ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!