ಉಪ್ಪಿನಂಗಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಲಾರಿ ಹಾಗೂ ಈಚರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈಚರ್ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ ಈಚರ್ ವಾಹನದ ಚಾಲಕನನ್ನು ಚನ್ನರಾಯಪಟ್ಟಣ ತಾಲೂಕಿನ ನವಿಲುಹೂಸೂರು ಗ್ರಾಮದ ನಿವಾಸಿ 48 ವರ್ಷದ ನಟರಾಜ್ ಎಂದು ಗುರುತಿಸಲಾಗಿದೆ. ಘಟನೆಯಿಂದ ನಜ್ಜುಗುಜ್ಜಾದ ಈಚರ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಪ್ರಯಾಸದಿಂದ ಹೊರತೆಗೆಯಲಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಲಾರಿ ಚಾಲಕ ಹಾಸನದ ಆಲೂರು ಮೂಲದ 26 ವರ್ಷದ ಶಶಿ ಎಂಬವರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿ0ದ ಬೆಂಗಳೂರಿಗೆ ಪ್ಲಾಸ್ಟಿಕ್ ಮಣಿ ಸಾಗಿಸುತ್ತಿದ್ದ ಈಚರ್ ಲಾರಿ ಬರ್ಚಿನಹಳ್ಳ ತಲುಪುತ್ತಿದ್ದಂತೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.ಘಟನೆಯಿಂದ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…