ಪುತ್ತೂರಿನ ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟಡ್ ಅಕೌಂಟೆ0ಟ್ಸ್ ಸಂಸ್ಥೆ ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪಿಯು ಕಾಲೇಜು ಹಾಗೂ ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಮತ್ತು ತ್ರಿಷಾ ವಿದ್ಯಾಸಂಸ್ಥೆ, ಮಂಗಳೂರಿನಲ್ಲಿ ಮಾಡಿದ್ದಾರೆ. ಅವರು ಮಂಗಳೂರಿನ ಖ್ಯಾತ ಚಾರ್ಟಡ್ ಅಕೌಂಟೆAಟ್ ಸಂಸ್ಥೆ ಎ. ಉಮಾನಾಥ್ ರಾವ್ ಅಂಡ್ ಕಂಪನಿಯಲ್ಲಿ ಸಿಎ ಆರ್ಟಿಕಲ್ ಶಿಪ್‌ನ್ನು ಪೂರ್ಣಗೊಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…