ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ.

ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಎಎ ವೃತ್ತದ ಬಳಿ ಬಸ್ ಬಂದಾಗ ಆಟೋವೊಂದು ಅಡ್ಡ ಬಂದಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರಾರೂ ಇರಲಿಲ್ಲ. ಚಾಲಕ ಒಬ್ಬರೆ ಇದ್ರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



