6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ) ಆನಗಳ್ಳಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ರಿಜಾಯ್ಸ್ ಈವೆಂಟ್, ಮಣಿಪಾಲ ಕೆಎಂಸಿ ಹಾಸ್ಪಿಟಲ್, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಸಹಯೋಗದೊಂದಿಗೆ ಶಿಬಿರ ನಡೆದಿದೆ.
ಗೀತಾಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ.ಕುಂದರ್ 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಬಳಿಕ ಅವರು ಮಾತನಾಡಿ, ಜಗತ್ತಿನಲ್ಲಿ ಬೇರೆ ಬೇರೆ ಟೆಕ್ನಾಲಜಿ ಬಂದಿರಬಹುದು ಆದರೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಿಕ್ಕೆ ಮನುಷ್ಯನಿಗೆ ಇನ್ನೂ ಸಾಧ್ಯವಾಗಲಿಲ್ಲ ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ರಕ್ತದಾನಿಗಳು ಹೆಚ್ಚು ಹೆಚ್ಚು ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯದಲ್ಲಿ ಯುವಕರು ಕೈಜೋಡಿಸಿ ಎಂದು ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಂದು ಶಿಬಿರಲ್ಲಿ 280 ಯುನಿಟ್ ರಕ್ತ ಸಂಗ್ರಹಿಸುವ ಮೂಲಕ ಇದು ಒಂದು ಮಹತ್ತರದ ಹಾಗೂ ಅರ್ಥ ಪೂರ್ಣ ಶಿಬಿರವಾಗಿದೆ ಎಂದು ಶ್ಲಾಘಿಸಿದ್ದಾರೆ. ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣೆಪಾಲ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಅಶೋಕ್ ದೇವಾಡಿಗ, ಪತ್ರಕರ್ತ ಆರೀಫ್ ಯು.ಆರ್, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವಿಶ್ವೇಶ್ ರವರನ್ನು ಸನ್ಮಾನಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…