ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ 18 ವರ್ಷದ ಅಫ್ತಾಬ್ ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಫ್ತಾಬ್ ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ವಿವಾಹವಾಗಿದ್ದಾರೆ. ಅವರ ತಾಯಿ ಕೋವಿಡ್ ಸಮಯದಲ್ಲಿ ನಿಧನರಾಗಿದ್ರು. ಅಂದಿನಿಂದ ತಂದೆ ಮತ್ತು ಮಗ ಮಾತ್ರ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆಟೋ ರಿಕ್ಷಾ ಚಾಲಕರಾದ ಅಲಿ, ಮಧ್ಯಾಹ್ನದವರೆಗೂ ತಮ್ಮ ಮಗನೊಂದಿಗೆ ಮನೆಯಲ್ಲಿದ್ರು. ಅವರು ಸುಮಾರು 1 ಗಂಟೆಗೆ ಕೆಲಸಕ್ಕೆ ಹೋದ ನಂತರ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…