ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ನವಂಬರ್ 14ರಂದು ತೆರೆಗೆ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ’ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ರು. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್‌ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ.

ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ನವಂಬರ್ 14 ರಂದು “ಜೈ” ಸಿನಿಮಾ ತೆರೆ ಕಾಣಲಿದೆ. ನಟ ಶಿವರಾಜ್ ಕುಮಾರ್ ಜೈ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!