ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ’ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ರು. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್‌ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ.
ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ನವಂಬರ್ 14 ರಂದು “ಜೈ” ಸಿನಿಮಾ ತೆರೆ ಕಾಣಲಿದೆ. ನಟ ಶಿವರಾಜ್ ಕುಮಾರ್ ಜೈ ಚಿತ್ರದ ಬಗ್ಗೆ ಮಾತನಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…