ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ.
ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಂ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದ್ರು. ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ರೂ ಜಿಲ್ಲೆಯ ಜನ ಉತ್ತಮರು ಎಂದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ 402 ಹುದ್ದೆಗೆ ಆದೇಶವಾಗಲಿದೆ. 10-15 ಸಾವಿರ ಕಾನ್ಸೆಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…