ಜನ ಮನದ ನಾಡಿ ಮಿಡಿತ

Advertisement

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು…!!

ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ 43 ವರ್ಷದ ಚಿದಾನಂದ ರೈ ಮೃತಪಟ್ಟಿದ್ದಾರೆ.

ಜು.7ರಂದು ಬೆಳಗ್ಗೆ ವಿಟ್ಲ -ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ರು. ಬಸ್ಸಿನ ಸಿಬ್ಬಂದಿ ಉಪಚರಿಸಲು ಮುಂದಾದಾಗ ನನಗೇನೂ ಆಗಿಲ್ಲ ಎಂದು ಬಸ್ಸನ್ನು ತೆರಳುವಂತೆ ಸೂಚಿಸಿದ್ದಾರೆ. ಸಾಯಂಕಾಲದ ವೇಳೆ ಚಿದಾನಂದ ಅವರು ಹಠಾತ್ ಅಸ್ವಸ್ಥಗೊಂಡಿದ್ರು. ಸ್ಥಳೀಯರು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಜು.8ರಂದು ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!