ನವ ವಿವಾಹಿತ ಯುವಕನೊಬ್ಬ ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32ರ ಹರೆಯದ ಭರತ್ ಸಾವನ್ನಪ್ಪಿದ ಯುವಕನಾಗಿದ್ದಾನೆ. ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ. ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಅವರಿಗೆ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಇದ್ದಾರೆ.



