ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ `ಪೆರ್ಮೆದ ಬಂಟೆರ್’- ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಇವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ವಿಶೇಷ ಸಾಧಕರನ್ನು ಸನ್ಮಾನಿಸುವುದರ ಜತೆಗೆ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. 115 ಮಂದಿಗೆ ವಿದ್ಯಾರ್ಥಿ ವೇತನ, ಒಟ್ಟು 300 ಕ್ಕಿಂತಲೂ ಅಧಿಕ ಮಂದಿಯನ್ನು ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ರು. ಬೆಳಗ್ಗೆ 9.30 ಕ್ಕೆ ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಧ್ವಜಾರೋಹಣ ಮಾಡಲಿದ್ದು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ನಿರ್ದೇಶಕ ಅರಿಯಡ್ಕ ಚಿಕ್ಕಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಬಂಟರ ಸಂಘಗಲ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ ಉಪಸ್ಥಿತರಿದ್ರು.



