ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕೆ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ.ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಅಪಘಾತ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ತಸ್ಲಿಂ ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಕಾರು ಮಾಲೀಕರಿಗೆ ತಿಳಿಸಿದ್ದರು. ಕಾರು ಮತ್ತು ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ಬಳಿಕ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ತಸ್ಲಿಂ 50,000 ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ದೂರುದಾರರು ತನ್ನ ವಕೀಲರಲ್ಲಿ ವಿಷಯವನ್ನು ತಿಳಿಸಿದರು. ಆಗ ವಕೀಲರು ಖುದ್ದು ಠಾಣೆಗೆ ಭೇಟಿ ನೀಡಿ ಕಾರನ್ನು ಬಿಟ್ಟುಕೊಡುವಂತೆ ಕೇಳಿಕೊಂಡರು.
ತಸ್ಲೀಮ್ ಕಾರು ಬಿಟ್ಟುಕೊಡುತ್ತೇನೆ ಕಾಗದ ಪತ್ರಗಳಿಗೆ ಸಹಿ ಹಾಕಿ ಎಂದು ತಿಳಿಸಿದರು. ಇದನ್ನು ನಂಬಿದ ಕಾರಿನ ಮಾಲೀಕರು ಸಹಿ ಹಾಕಿದರು.ಕಾರನ್ನು ಸ್ವೀಕರಿಸಿದ್ದಾರೆ ಎಂದು ಸಹಿ ಪಡೆದುಕೊಂಡ ತಸ್ಲೀಮ್ ಬಳಿಕ ಕಾರನ್ನು ಬಿಟ್ಟುಕೊಟ್ಟಿರಲಿಲ್ಲ.



