ಮಂಗಳೂರಿನಲ್ಲಿ ಸರಣಿ ಕೊಲೆ ಮತ್ತು ಆನಂತರ ಬೆಳವಣಿಗೆಯ ಪರಿಣಾಮ ಕೋಮು ದ್ವೇಷದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸರ್ವಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪ್ರಮುಖರು, ಶಾಸಕರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಹಲವು ಪ್ರಮುಖರು ತಮ್ಮವಿಚಾರಗಳನ್ನು ಹೇಳಿ ಶಾಂತಿ ಸೌಹಾರ್ದಕ್ಕೆ ಏನೇನು ಆಗಬೇಕೆಂದು ಸಲಹೆಗಳನ್ನು ನೀಡಿದ್ದಾರೆ. ಎಳೆಯ ಮಕ್ಕಳಲ್ಲಿ ವಿಷಬೀಜ ಬಿತ್ತಬೇಡಿ. ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ನಮ್ಮ ಪೂಜಾಪದ್ಧತಿಯೇ ಶ್ರೇಷ್ಠ ನಮ್ಮ ಧರ್ಮವೇ ಶ್ರೇಷ್ಠ ಉಳಿದದ್ದೆಲ್ಲ ಕನಿಷ್ಠ ಎಂದು ಬೋಧಿಸುವುದು ಮಕ್ಕಳ ಮನಸ್ಸಿನಲ್ಲಿ ಮೂಲಭೂತವಾದ ಬಿತ್ತುತ್ತದೆ. ಎಲ್ಲರ ಮನೆಗಳಲ್ಲಿ, ಎಲ್ಲ ಕಡೆಯ ಶಾಲೆಗಳಲ್ಲೂ ಎಲ್ಲ ಧರ್ಮಗಳೂ ಒಂದೇ ಎನ್ನುವ ಸೌಹಾರ್ದ ಭಾವನೆ ಬಿತ್ತಬೇಕು. ಹಾಗಾದಾಗ ಮಾತ್ರ ಶಾಂತಿ, ಸಾಮರಸ್ಯ ನೆಲೆಸಬಹುದು ಎಂದು ವಿಶ್ವ ಹಿಂದು ಪರಿಷತ್ ಪ್ರಮುಖ, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂಬಿ ಪುರಾಣಿಕ್ ಹೇಳಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…