ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ರು.
ಬಳಿಕ ಮಾತನಾಡಿದ ಇವರು, ಈ ಭಾಗದ ಜನರ ಬೇಡಿಕೆಯಂತೆ ಸುಮಾರು ಏಳುಕೋಟಿ ರೂ ವೆಚ್ಚದಲ್ಲಿ ಈ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ನಿರ್ಮಿಸಲಾಗಿದೆ. ಈಗಾಗಲೇ ದಾರಾವಾಡ, ಕೊಪ್ಪಳ, ದಾಂಡೇಲಿ ಸೇರಿದಂತೆ ಆರು ಕಡೆ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೆ ಬೆಳಗಾವಿ, ರಾಯಚೂರು, ದೇವನಹಳ್ಳಿ, ಕೋಲಾರ, ಹೊಸಪೇಟೆ, ಬಳ್ಳಾರಿ, ವಿಜಯಪುರ, ಇತ್ಯಾದಿ ಜಿಲ್ಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.
ಕರ್ನಾಟಕ ದೇಶದ ಅತೀ ಹೆಚ್ಚು ಟ್ರ‍್ಯಾಕ್ ಹೊಂದಿದ ರಾಜ್ಯವಾಗಿ ಗುರುತಿಸಿದೆ ಎಂದ್ರು. ದ.ಕ.ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ವಿದ್ಯುನ್ಮಾನ ಟ್ರ‍್ಯಾಕ್ ಉದ್ಘಾಟನೆ ಮೂಲಕ ಬಹಳ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಕೇಂದ್ರ ಸರ್ಕಾರದ ಮಹತ್ಚದ ಎಲೆಕ್ಟ್ರಾನಿಕ್ ಬಸ್ ಗಳು ಶೀಘ್ರದಲ್ಲೇ ದ.ಕ.ಜಿಲ್ಲೆಗೆ ಬರಲಿವೆ ಎಂದ್ರು. ಇದೇ ವೇಳೆ ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಮಾತಾನಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…