ಮಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಪ್ಲೈ ಓವರ್ ಕೆಳಗಡೆ ಕೃತಕ ನೆರೆ ಉಂಟಾಗಿದೆ.

ಮೊನ್ನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರ ನದಿಗಳ ನೀರಿನ ಮಟ್ಟ ಏರಿಕೆ ಕಂಡಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೃತಕ ನೆರೆಯಿಂದ ಶಾಲಾ ವಿದ್ಯಾರ್ಥಿಗಳು, ವಾಹನ ಸವಾರರು ತೊಂದರೆ ಅನುಭವಿಸಿದ್ರು.



