ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವರು ಎಂದು ಘೋಷಿಸಿದ ರೋಹನ್ ಕಾರ್ಪೋರೇಷನ್ ಮುಖ್ಯಸ್ಥ ಡಾ. ರೋಹನ್ ಮೊಂತೆರೋ ಕರ್ನಾಟಕದಲ್ಲಿ ಶಾರುಖ್ ಖಾನ್ ಅವರು ಬ್ರಾಂಡ್ ಅಂಬಾಸಿಡರ್ ಆಗಿರುವುದು ಇದೇ ಪ್ರಥಮ ಎಂದ್ರು.
ಇದರಿಂದಾಗಿ ನಮ್ಮ ಸಂಸ್ಥೆಯ ಮೂವತ್ತೆರಡು ವರ್ಷದ ಪಯಣಕ್ಕೆ ಇನ್ನಷ್ಟು ಉತ್ತೇಜನ ಬಂದಿದೆ. ಗುಣಮಟ್ಟ, ಶ್ರೇಷ್ಠತ್ವದ ಜೊತೆ ಗ್ಲಾಮರ್ ಕೈಜೋಡಿಸಿದಂತಾಗಿದೆ ಎಂದಿದ್ದಾರೆ. ಸಮಾರಂಭದಲ್ಲಿ ರೋಹನ್ ಕಾರ್ಪೋರೇಷನ್ ಸಂಸ್ಥೆಯ ಬೆಳವಣಿಗೆಯ ಪ್ರಯಾಣ ಮತ್ತು ಶಾರುಖ್ ಖಾನ್ ಅವರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವೀಡಿಯೋವನ್ನು ಪ್ರದರ್ಶಿಸಲಾಯಿತು. ರೋಹನ್ ಕಾರ್ಪೋರೇಷನ್ ಸಂಸ್ಥೆ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಜಾಗತಿಕ ಗುಣಮಟ್ಟದ ವಸತಿ ಹಾಗು ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸುತ್ತಿದೆ. ಇದುವರೆಗೆ ಐದು ಸಾವಿರಕ್ಕೂ ಅಧಿಕ ಸಂತೃಪ್ತ ಗ್ರಾಹಕ ಬಳಗಕ್ಕೆ ನೆಮ್ಮದಿಯ ವಸತಿಯನ್ನು ಒದಗಿಸಿಕೊಟ್ಟಿದೆ. ಮೂರು ದಶಕಗಳಲ್ಲಿ ಮಂಗಳೂರಿನಲ್ಲಿ ತನ್ನದೇ ವಿಶಿಷ್ಟ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ವಿಶ್ವಾಸದ ಪ್ರತೀಕವಾಗಿ ಅದರ ನಿರ್ಮಾಣಗಳು ಮಂಗಳೂರಿನ ಹೆಮ್ಮೆಯ ಹೆಗ್ಗುರುತುಗಳಾಗಿ ಕಂಗೊಳಿಸುತ್ತಿವೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…