ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದಿದ್ದಾರೆ.

ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದ್ರು. ಬಳಿಕ ಸಚಿವರನ್ನು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ ನಿರ್ಮಾಣ ಮಾಡಿರುವುದು ಬಹಳ ಸಂತೋಷ. ಇಲ್ಲಿನ ವಾಸ್ತುಶಿಲ್ಪ ಬಹಳಷ್ಟು ಚೆನ್ನಾಗಿ ಮೂಡಿಬಂದಿದೆ ಎಂದ್ರು.



