ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗು ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ರು. ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರ ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು ಮಠದ ಶ್ರೀವಿಠ್ಠಲ ದೇವರು, ಶ್ರೀಚಂದ್ರೇಶ್ವರ ದೇವರು, ಶ್ರೀಅನಂತೇಶ್ವರ, ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ನಂತರ ಮಠದ ಕಲ್ಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ ಹಾಗೂ ಕೈಗಾಡಿಯಲ್ಲಿ ಮತ್ತು ಭಕ್ತರು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ತರಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಅನೇಕ ಭಕ್ತರು ಭಾಗಿಯಾಗಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…