ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್‌ಎಸ್ ತೆರಳಿದ್ದರು. ಜೂನ್ 25ರ ಬುಧವಾರ ಅಂತರಿಕ್ಷಯಾನ ಹೊರಟಿದ್ದ ಯಾತ್ರಿಗಳು, 26ರಂದು ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಲ್ಯಾಂಡಿ0ಗ್ ಬಳಿಕ ಪುನಶ್ಚೇತನ ಕಾರ್ಯಕ್ರಮ ಇದೆ. ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುವಾಗುವಂತೆ 7 ದಿನಗಳ ಪುನಶ್ಚತನಕ್ಕೆ ಒಳಪಡಲಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ಚರಿತ್ರೆಯಲ್ಲಿ ಭಾರತದ ಹೊಸ ಮೈಲಿಗಲ್ಲು ಸ್ಥಾಪಿಸಿ ಆಗಿದೆ.

ಆಗಸದಲ್ಲಿ ಶುಭಾರಂಭ ಅಂತರಿಕ್ಷ ಯಾನ ಅಂತ್ಯವಾಗಿದೆ. ಗಗನದಿಂದ ಭಾರತವನ್ನು ಸಾರೆ ಜಹಾಂಸೆ ಅಚ್ಛಾ ಅಂತ ಶುಕ್ಲಾ ಬಣ್ಣಿಸಿದ್ದರು. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಿದ್ದಾರೆ. ವಿಶೇಷ ಅಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಪ್ರಯೋಗ ಇದೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳನ್ನ ನಡೆಸಿದ್ದಾರೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬ0ಧ ಅಧ್ಯಯನ ನಡೆದಿದೆ.



