ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಒಬ್ಬರ ಮೃತದೇಹ ಇಂದು ಬೆಳಗ್ಗಿನ ಜಾವ ಪತ್ತೆಯಾಗಿದೆ.
ಗಂಗೊಳ್ಳಿ ಬಂದರಿನಿಂದ ಜು.15 ರಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಮೂವರು ಮೀನುಗಾರರು ನಾಪತ್ತೆಯಾಗಿದ್ರು. ನಿರಂತರ ಶೋಧ ಕಾರ್ಯದಲ್ಲಿ 38 ವರ್ಷದ ಲೋಹಿತ್ ಖಾರ್ವಿ ಎಂಬವರ ಮೃತದೇಹ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಬುಧವಾರ ಬೆಳಗಿನ ಜಾವ ಪತ್ತೆಯಾಗಿದೆ. ನಾಪತ್ತೆಯಾದ ಇನ್ನಿಬ್ಬರು ಮೀನುಗಾರರಾದ, ಜಗನ್ನಾಥ ಖಾರ್ವಿ, ಸುರೇಶ್ ಖಾರ್ವಿ ಸುಳಿವು ಲಭ್ಯವಾಗಿಲ್ಲ. ಶೋಧ ಕಾರ್ಯ ಮುಂದುವರೆದಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…