ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗಂಗೊಳ್ಳಿ ದೋಣಿ ದುರಂತ; ಮೂರನೇ ಮೀನುಗಾರನ ಮೃತದೇಹ ಪತ್ತೆ

ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್‌ನೆಟ್ ನಾಡ ದೋಣಿ ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಮತ್ತು ಸುರೇಶ್ ಖಾರ್ವಿ ನಾಪತ್ತೆಯಾಗಿದ್ದು ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪದಲ್ಲಿ ಲೋಹಿತ್ ಖಾರ್ವಿ ಮೃತದೇಹ, ಸಂಜೆ ವೇಳೆಗೆ ಹಳೆ ಅಳಿವೆ ಎಂಬಲ್ಲಿ ಜಗನ್ನಾಥ್ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ರಾತ್ರಿಯವರೆಗೂ ಸುರೇಶ್ ಖಾರ್ವಿ ಅವರ ಸುಳಿವು ಲಭ್ಯವಾಗಿಲ್ಲದ ಕಾರಣ ಶೋಧ ಕಾರ್ಯ ಮುಂದುವರಿಸಿದ್ದು ಇಂದು ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!