ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್‌ನೆಟ್ ನಾಡ ದೋಣಿ ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಮತ್ತು ಸುರೇಶ್ ಖಾರ್ವಿ ನಾಪತ್ತೆಯಾಗಿದ್ದು ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪದಲ್ಲಿ ಲೋಹಿತ್ ಖಾರ್ವಿ ಮೃತದೇಹ, ಸಂಜೆ ವೇಳೆಗೆ ಹಳೆ ಅಳಿವೆ ಎಂಬಲ್ಲಿ ಜಗನ್ನಾಥ್ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ರಾತ್ರಿಯವರೆಗೂ ಸುರೇಶ್ ಖಾರ್ವಿ ಅವರ ಸುಳಿವು ಲಭ್ಯವಾಗಿಲ್ಲದ ಕಾರಣ ಶೋಧ ಕಾರ್ಯ ಮುಂದುವರಿಸಿದ್ದು ಇಂದು ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…