ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ.
ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು, ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿರುತ್ತಾರೆ. ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಐತಪ್ಪ ಆಳ್ವ ಬಿಸಿರೋಡ್, ಕಾರ್ಯದರ್ಶಿಯಾಗಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ ಕುಳ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ,ಜೊತೆ ಕೋಶಾಧಿಕಾರಿಯಾಗಿ ಶ್ರೀವಿದ್ಯಾ ರೈ, ಬಿಸಿರೋಡ್ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯ ಸಭೆಯು ಬಂಟ್ವಾಳ ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ಜರಗಿತು.
ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿ.ಸಿ.ರೋಡ್, ಶಾಂತರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…