ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ ಪರವಾಗಿ ಹಿರಿಯ ನ್ಯಾಯವಾದಿ ಪಿಪಿ ಹೆಗ್ಡೆ ವಾದಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ, ನಾನು ತಲೆಮರೆಸಿಕೊಂಡಿಲ್ಲ. ನನ್ನ ಕಚೇರಿಯಲ್ಲಿಯೇ ಇದ್ದೇನೆ. ಬಿಎನ್‌ಎಸ್ ಕಾಯ್ದೆ ಪ್ರಕಾರ 14 ದಿನಗಳ ಪ್ರಾಥಮಿಕ ತನಿಖೆಯನ್ನು ನಡೆಸಿ, ಪ್ರಕರಣ ದಾಖಲಿಸಬೇಕಿತ್ತು. ಪೋಲಿಸರು ಒತ್ತಡಕ್ಕೆ ಮಣಿದು ಏಕಾಏಕಿ ಪ್ರಕರಣ ದಾಖಲಿಸಿರುವುದು ಸಮಂಜಸವಲ್ಲ. ಅಲ್ಲದೇ ನನ್ನ ಕಚೇರಿಯಲ್ಲಿ ಕೆಲಸವನ್ನು ಬಿಟ್ಟು 8 ವರ್ಷದ ಬಳಿಕ, ಅಂದು ಜಾತಿ ನಿಂದನೆ ಮಾಡಿದ್ದೇನೆ ಎಂದು ದೂರು ನೀಡಿದ್ದಾರೆ. ಇದೊಂದು ಸುಳ್ಳು ಪ್ರಕರಣ ಎಂದು ತಿಳಿಸಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…