ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!

ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ.

ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ವಿಆರ್ ಡಬ್ಲ್ಯು, ತಾಲೂಕುಗಳಲ್ಲಿ ಎಂಆರ್‌ಡಬ್ಲ್ಯುಗಳು ಇರುತ್ತಾರೆ, ಸ್ವತ: ವಿಶೇಷ ಚೇತನರಾಗಿರುವ ಅವರು ಮನೆಗಳಿಗೆ ಭೇಟಿ ನೀಡಿ ವಿಶೇಷ ಚೇತನರನ್ನು ಗುರುತಿಸಿ ಸೌಲಭ್ಯಗಳು ದೊರೆಯುವಂತೆ ಮಾಡುತ್ತಾರೆ. ಯುಡಿಐಡಿ ಕಾರ್ಡ್ ಮಾಡಿಸಲೆಂದು ಆಸ್ಪತ್ರೆಗೆ ತಪಾಸಣೆಗೆ ನಿರ್ದಿಷ್ಟ ದಿನಗಳಂದು ಕಳಿಸುತ್ತಾರೆ. ನಿರ್ದಿಷ್ಟ ದಿನಗಳಂದು ವಿಶೇಷಚೇತನರನ್ನು ಅವರ ಪೋಷಕರು, ಪಾಲಕರು ಕರೆದುಕೊಂಡು ಬರುತ್ತಾರೆ. ಅದಕ್ಕಾಗಿ ಮನೆಯವರು ತಮ್ಮ ಉದ್ಯೋಗಗಳಿಗೆ ರಜೆ ಹಾಕಿ ಬಂದಿರುತ್ತಾರೆ. ಆದರೆ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯರಿಲ್ಲದ ಕಾರಣ ಇತರ ವೈದ್ಯರು ಪ್ರಮಾಣಪತ್ರ ನೀಡುವಂತಿಲ್ಲ. ಹೀಗಾಗಿ ಗ್ರಾಮಸ್ಥರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ದಿನಾಂಕ 11/07/2025ರಂದು ಇ.ಎನ್.ಟಿ. ಮಾನಸಿಕ ಚಿಕಿತ್ಸೆ, ಮೂಳೆ ಚಿಕಿತ್ಸೆ, ಮಕ್ಕಳ ವೈದ್ಯರು ಇರಲಿಲ್ಲ. ಒಬ್ಬರಿಗೆ ಮೀಟಿಂಗ್, ಒಬ್ಬರಿಗೆ ಆಪರೇಷನ್ ಇತ್ತು. ಒಬ್ಬರು ವರ್ಗಾವಣೆಯಾಗಿದ್ದಾರೆ, ಒಬ್ಬರಿಗೆ ಅನಾರೋಗ್ಯ ಎಂಬ ಕಾರಣಗಳಿಂದಾಗಿ ಹೆಚ್ಚಿನ ಶಸ್ತ್ರಚಿಕಿತ್ಸಕ ವೈದ್ಯರು ಕರ್ತವ್ಯದಲ್ಲಿ ಇರಲಿಲ್ಲ. ಯುಡಿಐಡಿ ಗುರುತಿನ ಚೀಟಿ ಆಧಾರ್, ಪಡಿತರ ಚೀಟಿಗೆ ಜೋಡಿಕೆಯಾಗಿದ್ದು ಮಾಸಾಶನ, ಉಪಕರಣಗಳು, ಚಿಕಿತ್ಸೆಯಲ್ಲಿ ರಿಯಾಯತಿ, ಕೃತಕ ಕಾಲು, ಗಾಲಿಕುರ್ಚಿ, ಕನ್ನಡಕ, ಶ್ರವಣ ಸಾಧನ, ಶಸ್ತ್ರಚಿಕಿತ್ಸೆ ಇತ್ಯಾದಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಸವಲತ್ತು ಬೇಕಾದರೂ ಇದೇ ಯುಡಿಐಡಿ ಸಂಖ್ಯೆ ಹಾಗೂ ಗುರುತಿನ ಚೀಟಿಯ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರ ಕೊರತೆಯನ್ನು ನೀಗಿಸಿ ವಿಕಲಚೇತನರ ಪ್ರಮಾಣಪತ್ರಗಳನ್ನು ಕ್ಲಪ್ತಸಮಯದಲ್ಲಿ ಒದಗಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸುವಂತೆ ಪತ್ರದಲ್ಲಿ ಮನವಿಯನ್ನು ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!