ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ್ರು. ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಇದರ ಅಂಗವಾಗಿ 18 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿದ್ದೇವೆ. ಇದರಲ್ಲಿ ಮೂರು ಪ್ರಶಸ್ತಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಉಳಿದ ಪ್ರಶಸ್ತಿಗಳಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ.
ಆದರೆ, ಪುರಸ್ಕೃತರ ಸಾಧನೆಗೆ ಈ ಹಣ ಸಮವಲ್ಲ. ಆದರೆ, ಇದು ಕನ್ನಡ ಸಂಸ್ಕೃತಿಯ ಕೆಲಸಕ್ಕೆ ಕೊಡುವ ಗೌರವ ಎಂದಿದ್ದಾರೆ. ಬಹಳ ಮಂದಿ ಸಂಸ್ಕೃತಿ ವಿಚಾರದಲ್ಲಿ ಸಾಧನೆ ಮಾಡುತ್ತಲೇ ಇರುತ್ತಾರೆ. 2000 ವರ್ಷಗಳ ಇತಿಹಾಸ ಇರುವ ಕನ್ನಡದ ಸಾಂಸ್ಕೃತಿಕ ಸಂಪತ್ತು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ರಾಜ್ಯದ ಮೊದಲ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿದ್ದವನು ನಾನು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೆ ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುವವನು. ಕನ್ನಡ ಕರ್ನಾಟಕದಲ್ಲಿ ಸಾರ್ವಭೌಮ ಭಾಷೆ ಆಗಬೇಕು ಎನ್ನುವ ದಿಕ್ಕಿನಲ್ಲಿ ಬೇಷರತ್ ಬದ್ಧತೆ ಇಟ್ಟುಕೊಂಡು ನಾನು ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…