ಕಾಸರಗೋಡು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ.
ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ. ಈ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆ ಸಮೀಪದ ಗುಡ್ಡ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ. ಬೃಹತ್ ಕಲ್ಲು ಸಹಿತ ಮಣ್ಣು ಮನೆಯ ಒಂದು ಭಾಗದ ಮೇಲೆ ಬಿದ್ದು ದೊಡ್ಡ ಅಪಾಯಕ್ಕೆ ಕಾರಣವಾಗಿದೆ. ಅವಘಡದಿಂದ ಮನೆಯ ಒಂದು ಕೊಠಡಿ ಸಂಪೂರ್ಣವಾಗಿ ಕುಸಿದಿದ್ದು,ಮನೆ ಭಾಗಶಃ ಹಾನಿಗೆ ಒಳಗಾಗಿದೆ. ಅದೃಷ್ಟವಶಾತ್ ಜೀವ ಹಾನಿ ಉಂಟಾಗಿಲ್ಲ. ಮನೆಯಲ್ಲಿ ನಾಲ್ವರು ವಾಸಿಸುತ್ತಿದ್ದು, ಕುಸಿತದ ಸದ್ದು ಕೇಳಿ ಮನೆಯಲ್ಲಿದ್ದವರು ಹೊರಗೆ ಓಡಿ ಬಚಾವಾಗಿದ್ದಾರೆ. ಮನೆಯ ಸಮೀಪದ ಗುಡ್ಡ ಕುಸಿಯುವ ಬಗ್ಗೆ ಈ ಹಿಂದೆಯೇ ಸಂಶಯಗಳಿದ್ದು, ಎರಡು ವರ್ಷಗಳ ಹಿಂದೆಯೇ ಕಂದಾಯ ಇಲಾಖೆಯ ಅಧಿಕೃತರಿಗೆ ಮನವಿ ನೀಡಿ ವಿಷಯದ ಗಂಭೀರತೆಯನ್ನು ತಿಳಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…