ಹನಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರವಚನ ಕೊಠಡಿ ಮತ್ತು ಅಡುಗೆ ಮನೆಯ ಕೊಠಡಿ ತುಂಬಾ ಹಳೆಯದಾದ ಹಾಗೂ ಮಳೆ ಕಾರಣದಿಂದ ಪೂರ್ಣವಾಗಿ ಶಿಥಿಲಗೊಂಡಿದ್ದು, ಮಕ್ಕಳು ಶಿಥಿಲವಾದ ಕಟ್ಟಡದಲ್ಲೇ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. 
ಹಾಗಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸುವ ಪರಿಸ್ಥಿತಿ ಎದುರಾಗಿದೆ. ಕಟ್ಟಡದ ಮೇಲ್ಬಾವಣಿ ಕುಸಿಯಲು ಆರಂಭಿಸಿದೆ. ಜೊತೆಗೆ ಶಾಲೆಗೆ ಸೂಕ್ತವಾದ ಕಾಂಪೌಂಡ್ ಇಲ್ಲ, ಸಮರ್ಪಕ ಮೈದಾನ ಇಲ್ಲ- ಹೀಗೆ ಹಲವಾರು ಅವ್ಯವಸ್ಥೆಗಳಿಂದ ಕೂಡಿದ್ದು, 1-7 ರವರೆಗೆ 160ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದು, ಶಾಲೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಇದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಮತನಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ತುಂಬಾ ಕಡಿಮೆ ಅದರಲ್ಲೂ ಈ ರೀತಿಯ ಸೌಲಭ್ಯ ಕೊರತೆಯ ಕಾರಣಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಇಷ್ಟಪಡುವುದಿಲ್ಲ. ಆದಾಗಿ ಈ ಮೂಲಕನಾದರೂ ಅಧಿಕಾರಿಗಳು, ಜನಪ್ರತಿನಿದಿಗಳು ಗಮನವಹಿಸಿ ಶಾಲೆಯ ಕಟ್ಟಡಗಳನ್ನು ದುರಸ್ತಿಗೊಳಿಸಿ ಮಕ್ಕಳು ನೆಮ್ಮದಿಯಿಂದ ಪಾಠ ಪ್ರವಚನ ಕೇಳಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.



