ದಿ ಅನ್‌ಕ್ಯೂ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಇಲಾಖೆಯು ಭಾರತದ ನಿವಾಸಿಗಳಿಗೆ ಗುರುತಿನ ಹಾಗೂ ವಿಳಾಸದ ಪುರಾವೆಗಾಗಿ ಆಧಾರ್ ಕಾರ್ಡ್ಗಳನ್ನ ನೀಡುತ್ತದೆ. ಭಾರತದದಲ್ಲಿ ಈಗಾಗಲೇ ಶೇಕಡಾ 90ಕ್ಕಿಂತಲೂ ಅಧಿಕ ಜನರಿಗೆ ಆಧಾರ್ ಕಾರ್ಡ್ ವಿತರಣೆ ಆಗಿದೆ. ಈ ಆಧಾರ್ ಕಾರ್ಡ್ ವಯಸ್ಕರಿಗೆ ಮಾತ್ರವಲ್ಲ, ಮಕ್ಕಳಿಗೂ ಅತ್ಯಂತ ಮುಖ್ಯವಾದ ದಾಖಲೆ ಆಗಿದೆ.
ಯಾವ ವಯಸ್ಸಿನಲ್ಲಿ ಮಕ್ಕಳ ಬಯೋಮೆಟ್ರಿಕ್ ಅನ್ನು ಸ್ವೀಕರಿಸಲಾಗುತ್ತದೆ ಎಂಬುವುದರ ಬಗ್ಗೆ ನೋಡುವುದಾದರೆ ಆಧಾರ್ ಕಾರ್ಡ್ ನೋಂದಾಣಿ ಮಾಡುವಾಗ 5 ವರ್ಷದ ಒಳಗಿನ ಮಕ್ಕಳ ಬಯೋಮೆಟ್ರಿಕ್ ಮಾಹಿತಿಯನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಮಕ್ಕಳ ಬೆರಳಚ್ಚುಗಳು ಮತ್ತು ಐರಿಸ್ ಸ್ಕ್ಯಾನ್‌ಗಳು ಸ್ಪಷ್ಟವಾಗಿ ಇರುವುದಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಮಾಡುವಾಗ ಮಗುವಿನ ಫೋಟೋ ಹಾಗೂ ಸಾಮಾನ್ಯ ಮಾಹಿತಿ ಮಾತ್ರ ತೆಗೆದುಕೊಳ್ಳಲಾಗುತ್ತದೆ. ಆದರೆ ಮಗುವಿನ ನಿರ್ದಿಷ್ಟ ವಯಸ್ಸಿನ ನಂತರ, ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ಸ್ ನವೀಕರಿಸಲೇಬೇಕು. ಯುಐಡಿಎಐ ಇಲಾಖೆಯ ಪ್ರಕಾರ ಮಕ್ಕಳು ನಿರ್ದಿಷ್ಟ ವಯಸ್ಸಿಗೆ ಬಂದಾಗ ಬಯೋಮೆಟ್ರಿಕ್ ಮಾಹಿತಿ ನವೀಕರಣ ಮಾಡಬೇಕು. 5 ವರ್ಷ ಆಗಿದ್ದಾಗ ಮೊದಲ ಬಾರಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಬೇಕು. 5 ವರ್ಷದಿಂದ 7 ವರ್ಷದ ಒಳಗೆ ಒಮ್ಮೆ ಅಪ್‌ಡೇಟ್ ಮಾಡಿಸಬೇಕು. ಇದಾದ ಮೇಲೆ ಮತ್ತೆ 15ನೇ ವರ್ಷದಲ್ಲಿ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲೇಬೇಕು. ಇದು ನಿಮ್ಮ ಮಗುವಿನ ಜೀವನಕ್ಕೆ ಅನುಕೂಲವಾಗುತ್ತದೆ. ಒಂದು ವೇಳೆ ಮಗುವಿನ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಲ್ಲ ಎಂದರೆ ಆಧಾರ್ ಕಾರ್ಡ್ ನಿಷ್ಕ್ರಿಯ ಮಾಡಲಾಗುತ್ತೆ. ಇದರಿಂದ ಶಾಲೆ, ಕಾಲೇಜು, ಬ್ಯಾಂಕ್ ಸೇರಿದಂತೆ ಇತರೆ ಪ್ರಮುಖವಾಗಿ ಬೇಕಾದ್ದಲ್ಲೇ ಮಾನ್ಯ ಆಗುವುದಿಲ್ಲ. ಹೀಗಾಗಿ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ನಿಮ್ಮ ಮಕ್ಕಳಿಗೆ 15 ವರ್ಷಗಳು ತುಂಬಿದ್ರೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಿ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…