ಮಂಗಳೂರು, ಜು. 20 ರಂದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ನಗರ ಬಸ್ ಶನಿವಾರ ಸಂಜೆ ದೇರೆಬೈಲ್ ಸಮೀಪದ ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನಲ್ಲಿರುವ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಮೆಟ್ಟಿಲುಗಳಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಶನಿವಾರ ಸಂಜೆ 4:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಲ್ಯಾಂಡ್‌ಲಿಂಕ್ಸ್-ಬಜಾಲ್‌ಪಡ್ಪು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಗರ ಬಸ್, ತನ್ನ ಕೊನೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ವಾಪಸ್ ತಿರುಗಲು ಪ್ರಯತ್ನಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಸ್ ಸಮೀಪದ ಮನೆಯಕಾಂಪೌಂಡ್ ಗೋಡೆಯನ್ನು ಒಡೆದು ಟೆರೇಸ್‌ಗೆ ಹೋಗುವ ಮೆಟ್ಟಿಲುಗಳಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಮನೆಯಕಾಂಪೌಂಡ್ ಗೋಡೆ ಮತ್ತು ಮೆಟ್ಟಿಲುಗಳಿಗೂ ಹಾನಿಯಾಗಿದೆ. ಘಟನೆ ನಡೆದ ಸಮಯದಲ್ಲಿ ಮನೆ ಮಾಲೀಕರು ಬೇರೆಡೆ ವಾಸವಾಗಿದ್ದ ಕಾರಣ ಮನೆ ಖಾಲಿಯಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದಾಗ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಕೆಲವೇ ಕೆಲವು ಪ್ರಯಾಣಿಕರಿದ್ದರು. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದ್ದು, ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.



