ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ: ಕೆಪಿಎಂಇ ಪರವಾನಿಗೆ ಇಲ್ಲದ ಡಯಾಗ್ನೋಸ್ಟಿಕ್ & ಪಾಲಿಕ್ಲಿನಿಕ್ ಗೆ ಬೀಗ ಮುದ್ರೆ ಜಡಿದ ಆರೋಗ್ಯಾಧಿಕಾರಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಹತ್ತು ತಂಡಗಳನ್ನ ರಚಿಸಿ ಜಿಲ್ಲೆಯ ವಿವಿಧೆಡೆಯ ಪಾಲಿಕ್ಲಿನಿಕ್ ಹಾಗೂ ಮೆಡಿಕಲ್ ಲ್ಯಾಬ್‌ಗಳ ತಪಾಸಣೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಕೆಪಿಎಮ್ ಇ ಪರವಾನಿಗೆ ಇಲ್ಲದೆ ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ದೇರಳಕಟ್ಟೆಯ ಡಯಾಗ್ನೋಸ್ಟಿಕ್ ಆಂಡ್ ಪಾಲಿಕ್ಲಿನಿಕ್‌ಗೆ ಅಧಿಕಾರಿಗಳು ಬೀಗ ಮುದ್ರೆ ಜಡಿದಿದ್ದಾರೆ.

ದೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿದ್ದ “ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿ ಕ್ಲಿನಿಕ್’ ಗೆ ಶನಿವಾರದಂದು ದಾಳಿ ನಡೆಸಿದ ಆರೋಗ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿದ್ದು, ಕೆಪಿಎಮ್ ಇ ಪರವಾನಿಗೆ, ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಪರವಾನಿಗೆ, ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಅಗ್ರಿಮೆಂಟ್ ಇಲ್ಲದೆನೇ ನಿಯಮಗಳನ್ನ ಉಲ್ಲಂಘಿಸಿ ಪಾಲಿಕ್ಲಿನಿಕ್ ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿತ್ತು.

ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿಕ್ಲಿನಿಕ್ ಗೆ ನಾಲ್ಕು ದಿವಸಗಳ ಹಿಂದಷ್ಟೆ ನೋಟೀಸ್ ಜಾರಿ ಮಾಡಿದ್ದಲ್ಲದೆ, ಕ್ಲಿನಿಕನ್ನ ತೆರೆಯದಂತೆ ಮೌಖಿಕವಾಗಿಯೂ ಎಚ್ಚರಿಕೆ ನೀಡಿದ್ದೆವು. ಇಲಾಖೆಯ ನೋಟೀಸಿಗೂ ಕ್ಯಾರೇ ಎನ್ನದ ಪಾಲಿಕ್ಲಿನಿಕ್ ಬಾಗಿಲು ತೆರೆದು ಕಾರ್ಯಾಚರಿಸುತ್ತಿದ್ದು ಶನಿವಾರದಂದು ನಮ್ಮ ಅಧಿಕಾರಿಗಳು ದಾಳಿ ನಡೆಸಿ ಕ್ಲಿನಿಕ್ ಗೆ ಬೀಗ ಮುದ್ರೆ ಜಡಿದಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳು ಹೃದಯಾಘಾತ ಪ್ರಕರಣಗಳ ಬಗ್ಗೆ ಸಮರ್ಪಕವಾದ ಮಾಹಿತಿಗಳನ್ನ ಇಲಾಖೆಗೆ ನೀಡಬೇಕು. ಹೃದ್ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗಬಾರದೆಂಬುದು ಒಂದು ಉದ್ದೇಶವಾದರೆ, ಜಿಲ್ಲೆಯಲ್ಲಿ ಕೆಪಿಎಮ್ ಇ ಕಾಯ್ದೆಯನ್ನ ಸಮರ್ಪಕವಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳನ್ನ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಹೆಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!