ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಹತ್ತು ತಂಡಗಳನ್ನ ರಚಿಸಿ ಜಿಲ್ಲೆಯ ವಿವಿಧೆಡೆಯ ಪಾಲಿಕ್ಲಿನಿಕ್ ಹಾಗೂ ಮೆಡಿಕಲ್ ಲ್ಯಾಬ್‌ಗಳ ತಪಾಸಣೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಕೆಪಿಎಮ್ ಇ ಪರವಾನಿಗೆ ಇಲ್ಲದೆ ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ದೇರಳಕಟ್ಟೆಯ ಡಯಾಗ್ನೋಸ್ಟಿಕ್ ಆಂಡ್ ಪಾಲಿಕ್ಲಿನಿಕ್‌ಗೆ ಅಧಿಕಾರಿಗಳು ಬೀಗ ಮುದ್ರೆ ಜಡಿದಿದ್ದಾರೆ.
ದೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿದ್ದ “ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿ ಕ್ಲಿನಿಕ್’ ಗೆ ಶನಿವಾರದಂದು ದಾಳಿ ನಡೆಸಿದ ಆರೋಗ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿದ್ದು, ಕೆಪಿಎಮ್ ಇ ಪರವಾನಿಗೆ, ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಪರವಾನಿಗೆ, ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಅಗ್ರಿಮೆಂಟ್ ಇಲ್ಲದೆನೇ ನಿಯಮಗಳನ್ನ ಉಲ್ಲಂಘಿಸಿ ಪಾಲಿಕ್ಲಿನಿಕ್ ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿತ್ತು.
ದೇರಳಕಟ್ಟೆ ಡಯಾಗ್ನೋಸ್ಟಿಕ್ & ಪಾಲಿಕ್ಲಿನಿಕ್ ಗೆ ನಾಲ್ಕು ದಿವಸಗಳ ಹಿಂದಷ್ಟೆ ನೋಟೀಸ್ ಜಾರಿ ಮಾಡಿದ್ದಲ್ಲದೆ, ಕ್ಲಿನಿಕನ್ನ ತೆರೆಯದಂತೆ ಮೌಖಿಕವಾಗಿಯೂ ಎಚ್ಚರಿಕೆ ನೀಡಿದ್ದೆವು. ಇಲಾಖೆಯ ನೋಟೀಸಿಗೂ ಕ್ಯಾರೇ ಎನ್ನದ ಪಾಲಿಕ್ಲಿನಿಕ್ ಬಾಗಿಲು ತೆರೆದು ಕಾರ್ಯಾಚರಿಸುತ್ತಿದ್ದು ಶನಿವಾರದಂದು ನಮ್ಮ ಅಧಿಕಾರಿಗಳು ದಾಳಿ ನಡೆಸಿ ಕ್ಲಿನಿಕ್ ಗೆ ಬೀಗ ಮುದ್ರೆ ಜಡಿದಿದ್ದಾರೆ.
ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳು ಹೃದಯಾಘಾತ ಪ್ರಕರಣಗಳ ಬಗ್ಗೆ ಸಮರ್ಪಕವಾದ ಮಾಹಿತಿಗಳನ್ನ ಇಲಾಖೆಗೆ ನೀಡಬೇಕು. ಹೃದ್ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗಬಾರದೆಂಬುದು ಒಂದು ಉದ್ದೇಶವಾದರೆ, ಜಿಲ್ಲೆಯಲ್ಲಿ ಕೆಪಿಎಮ್ ಇ ಕಾಯ್ದೆಯನ್ನ ಸಮರ್ಪಕವಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಮೆಡಿಕಲ್ ಲ್ಯಾಬ್ ಮತ್ತು ಪಾಲಿಕ್ಲಿನಿಕ್ ಗಳನ್ನ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಹೆಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…