ತೆಂಕುತಿಟ್ಟಿನ ಹಿರಿಯ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇಂದು ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ಸುಮಾರು ಮೂರು ದಶಕಗಳಿಗೂ ಅಧಿಕ ಕಾಲ ವಿವಿಧ ಮೇಳಗಳಲ್ಲಿ ಬಣ್ಣದ ವೆಷಧಾರಿಯಾಗಿ ತಿರುಗಾಟ ನಡೆಸಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಹನುಮಗಿರಿ ಮೇಳ ತಿರುಗಾಟ ಮುಗಿಸಿದ ನಂತರ ಅವರು ನಿವೃತ್ತಿಯನ್ನೂ ಘೋಷಣೆ ಮಾಡಿದ್ದರು. ಯಕ್ಷಗಾನ ಗುರುಗಳಾದ ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಹಾಲಿಂಗ ಅವರಿಂದ ನಾಟ್ಯಾಭ್ಯಾಸ ಕಲಿತು ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಹತ್ತು ದಿನಗಳ ಹಿಂದಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಯಕ್ಷಮಂಗಳ ಪ್ರಶಸ್ತಿ ಸ್ವೀಕರಿಸಿದ್ದರು. ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…