ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಮತ್ತೆ ಹೆಚ್ಚಿದ ಕಳ್ಳರ ಹಾವಳಿ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ ನಗರ ಪೊಲೀಸ್ ಠಾಣೆ ಸಮೀಪದ ಕಂದಾಯ ಇಲಾಖೆಯ ಸರ್ಕಾರಿ ವಸತಿ ಸಮುಚ್ಛಯದಲ್ಲಿ ಜುಲೈ 19 ರ ತಡರಾತ್ರಿಯಿಂದ ಭಾನುವಾರ ಮುಂಜಾನೆಯ ನಡುವೆ ಕಳ್ಳತನ ನಡೆದಿದೆ.

ವಸತಿ ಸಮುಚ್ಛಯದ ಆವರಣದಲ್ಲಿನ ಸಿಸಿಟಿವಿ ದೃಶ್ಯಾವಳಿಯ ಪ್ರಕಾರ, 3 ರಿಂದ 4 ದುಷ್ಕರ್ಮಿಗಳ ಗುಂಪು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಕಳ್ಳರು ಕನಿಷ್ಠ ಮೂರು ಮನೆಗಳಿಗೆ ನುಗ್ಗಿ, ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ವಸತಿ ಸಮುಚ್ಛಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಸುಮಾರು ಒಂದು ವರ್ಷದ ಹಿಂದೆ ಇದೇ ವಸತಿ ಸಮುಚ್ಛಯಕ್ಕೆ ನುಗ್ಗಿದ ಕಳ್ಳರು, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದರು. ಆ ಸಮಯದಲ್ಲಿ ಇಲ್ಲಿ ಸಿಸಿಟಿವಿ ಕಣ್ಗಾವಲು ಇರಲಿಲ್ಲ. ಆ ಘಟನೆಯ ನಂತರ, ನಿವಾಸಿಗಳೇ ಸೇರಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ವರ್ಷದ ಹಿಂದಿನ ಕಳ್ಳತನ ಪ್ರಕರಣದ ಆರೋಪಿಗಳನ್ನು ಇನ್ನೂ ಪತ್ತೆಯಾಗಿಲ್ಲ.

ಅದಾಗಲೇ ಮತ್ತೊಮ್ಮೆ ಕಳ್ಳತನ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!