ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉತ್ತರಕನ್ನಡ ನಿವಾಸಿ ಕೀರಪ್ಪ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಅವರು ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇವರ ಕುಟುಂಬ ಸದಸ್ಯರು ಉತ್ತರ ಕನ್ನಡದಲ್ಲೇ ಇದ್ದು,ಇವರು ಒಬ್ಬರೇ ಇಲ್ಲಿ ಇದ್ದರು. ಬಂಟ್ವಾಳ ಪೇಟೆಯಲ್ಲಿರುವ ಚಿನ್ನದ ಉದ್ಯಮಿಯೋರ್ವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.
ಬೆಳಿಗ್ಗೆಯಿಂದ ಕರ್ತವ್ಯ ಕ್ಕೆ ಹಾಜರಾಗದೆ ಇದ್ದ ಸಬ್ ಇನ್ಸ್ ಪೆಕ್ಟರ್ ಅವರು ಪೋನ್ ಕಾಲ್ ಕೂಡ ರಿಸೀವ್ ಮಾಡದೆ ಇದ್ದ ಕಾರಣದಿಂದ ಸಂಶಯಗೊಂಡ ಪೋಲೀಸರು ಇಂದು ಸಂಜೆ ವೇಳೆ ಅವರು ವಾಸಿಸುವ ಬಾಡಿಗೆ ಮನೆಗೆ ಹೋಗಿ ನೋಡಿದಾಗ ಬೀಗ. ಹಾಕಿದ ಸ್ಥಿತಿಯಲ್ಲಿ ಇತ್ತು ಕರೆದಾಗ ಯಾವುದೇ ಸ್ಪಂದನೆ ನೀಡದೆ ಇದ್ದಾಗ , ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಆಡಿಸನಲ್ ಎಸ್.ಪಿ. ಬೇಟಿ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…