ಕರಾವಳಿ

ಕುಂದಾಪುರ: 5.6 ಲಕ್ಷ ಮೌಲ್ಯದ ಅಡಿಕೆ ಕಳ್ಳತನ; ಪೊಲೀಸರಿಂದ ನಾಲ್ವರ ಬಂಧನ

ಕುಂದಾಪುರದಲ್ಲಿ ಜು. 22ರಂದು ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಸಮೀಪದ ಹಡವಿನಗದ್ದೆಯಲ್ಲಿರುವ ಮಸೂದ್ ಪಟೇಲ್ ಭಟ್ಕಳ ಅವರ ರೋಯಲ್ ಪ್ಲಾಂಟೇಶನ್ ಗೋದಾಮಿನಿಂದ ಸುಮಾರು 5.6 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕಿನ ನೂಜಿ ಬಾಳ್ತಿಲದ ಸಂತೋಷ (35), ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿಂಡಿನಗೆರೆಯ ಪ್ರಸ್ತುತ ಭಟ್ಕಳದಲ್ಲಿ ವಾಸವಾಗಿರುವ ಶಾನೂರ್ ಬಾಬುಲಾಲ್ ನವಾಜ್ ಘಜ್ನಿ (31), ಭಟ್ಕಳದ ಖ್ವಾಜಾ ಮೊಹಮ್ಮದ್ (26) ಮತ್ತು ಮೊಹಮ್ಮದ್ ಸಾದಿಕ್ (27) ಭಂಧಿತ ಆರೋಪಿಗಳು. ಪೊಲೀಸರು 455 ಕೆಜಿ ಕಳುವಾದ ಅಡಿಕೆ ಮತ್ತು ಕಳವು ಮಾಡಿದ ಸರಕುಗಳನ್ನು ಸಾಗಿಸಲು ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಂಟೇಶನ್‌ನ ಮಾಲೀಕ ಮಸೂದ್ ಪಟೇಲ್ ಭಟ್ಕಳ ಅವರು ಯಡ್ತರೆ ಗ್ರಾಮದ ಹಡಿನಗದ್ದೆಯಲ್ಲಿ 60 ಎಕರೆ ಭೂಮಿಯಲ್ಲಿ ಕೃಷಿ ಮಾಡಿಕೊಂಡಿದ್ದಾರೆ. ತೋಟದಲ್ಲಿ ಬೆಳೆದ ಸುಮಾರು 200 ಚೀಲ ಒಣಗಿಸಿದ ಸಿಪ್ಪೆ ಸಹಿತ ಅಡಿಕೆಯನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಗೋದಾಮಿನಲ್ಲಿ ಸಂಗ್ರಹಿಸಿದ್ದರು. ಮೇ 22 ರ ಬೆಳಗ್ಗೆ, ಗೋದಾಮಿನ ಮುಂಭಾಗದ ಕಬ್ಬಿಣದ ಗ್ರಿಲ್ ಲಾಕ್ ಮುರಿದಿರುವುದನ್ನು ಗಮನಿಸಿದ ಅವರು, ಒಳಗೆ ಹೋಗಿ ನೋಡಿದಾಗ 200 ಚೀಲ ಅಡಿಕೆ ಕಳ್ಳತನವಾಗಿರುವುದು ಕಂಡುಬಂದಿದೆ. ಬೈಂದೂರು ಪರಿಸರದಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ, ಆರೋಪಿಗಳ ಪತ್ತೆಗೆ ಉಡುಪಿ ಜಿಲ್ಲಾ ಎಸ್‌ಪಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖೆಯನ್ನು ಪ್ರಾರಂಭಿಸಲಾಯಿತು. ಆರೋಪಿಗಳ ಪತ್ತೆಗಾಗಿ ಕುಂದಾಪುರ ಎಎಸ್‌ಪಿ ಸುಧಾಕರ ನಾಯ್ಕ, ಡಿವೈಎಸ್‌ಪಿ ಹೆಚ್ ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನೀರಿಕ್ಷಕ ಸವೀತ್ರ ತೇಜ್ ಅವರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಯಿತು. ವಿವಿಧ ಠಾಣೆಗಳ ಪಿಎಸ್‌ಐಗಳಾದ ತಿಮ್ಮೇಶ್ ಬಿ.ಎನ್, ನವೀನ ಬೋರಕರ, ವಿನಯ ಅವರು ತಂಡಗಳ ನೇತೃತ್ವ ವಹಿಸಿದ್ದರು. ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ್, ಚಿದಾನಂದ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ ರವೀಂದ್ರ, ಅಶೋಕ ಮತ್ತು ಚಂದ್ರ ತಂಡದಲ್ಲಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

6 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

6 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

6 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

6 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

6 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

6 hours ago