ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.
ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದೆ. ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆ ಯಾವುದೇ ಅಪಾಯವಗಿಲ್ಲ.
ಸುಮಾರು 3 ಕಿ.ಮೀ. ವರೆಗೆವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳು ಇರುವುದರಿಂದ ಎಷ್ಟು ಹೊತ್ತು ಬ್ಲಾಕ್ ಇದ್ದರೂ ಊಟ, ತಿಂಡಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…