ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು. ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದು, ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…