ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜುಲೈ 18ರಂದು “ಆಟಿದ ಅಂಗಣ -2025” ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾಟಿ ವೈದ್ಯರಾದ ಶ್ರೀ ಈಶ್ವರ ಪೂಜಾರಿ ಕಲಾಯಿ ಇವರು ಪರಿಸರದಲ್ಲಿ ದೊರಕುವ ಗಿಡಮೂಲಿಕೆಗಳ ಮಹತ್ವವನ್ನು ನೀಡಿದರು. ಆಟಿಯ ಮಹತ್ವದ ಕುರಿತು ಉಡುಪಿ ಸಮೂಹ ಶಿಕ್ಷಣ ಸಂಸ್ಥೆ ಮಣಿಪಾಲ ಇಲ್ಲಿನ ಸಹ ಪ್ರಾಧ್ಯಾಪಕಿ ಶ್ರೀಮತಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಇವರು ಉಪನ್ಯಾಸ ನೀಡಿ ಈ ಕಾರ್ಯಕ್ರಮವು ಕೇವಲ ಅಂಗಣದೊಳಗೆ ಸೀಮಿತವಾಗದೆ ಇಲ್ಲಿನ ಸಂಸ್ಕೃತಿ ಸಂಸ್ಕಾರವನ್ನು ತಿಳಿದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಈ ಕಾರ್ಯಕ್ರಮಕ್ಕೆ ಮೆರುಗು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ವಸಂತ ಕಾರಂದೂರು ವಹಿಸಿದ್ದರು. ಶ್ರೀ ವೆಂಕಟೇಶ ಶಿವಭಕ್ತಿ ಯೋಗಾ ಸಂಘದ ಉಪಾಧ್ಯಕ್ಷರಾದ ಡಾ. ಬಿ. ಜಿ. ಸುವರ್ಣ, ಸದಸ್ಯರಾದ ಶ್ರೀ ಜಯರಾಮ ಕಾರಂದೂರು, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಘುರಾಜ್ ಕದ್ರಿ, ಪ್ರಾಂಶುಪಾಲರಾದ ಪ್ರೊ. ಉದಯ್ ಕುಮಾರ್ ಬಿ., ಸಾಂಸ್ಕೃತಿಕ ಸಂಘದ ಮುಖ್ಯಸ್ಥೆ ಶ್ರೀಮತಿ ಸುಚಿತ್ರಾ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಯಶಸ್ವಿನಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಾಜೇಶ್ ಗೌಡ, ಕ್ರೀಡಾ ಕಾರ್ಯದರ್ಶಿ ಶ್ರೀ ಶರತ್ ಬಿ. ಎಮ್. ಉಪಸ್ಥಿತರಿದ್ದರು. ಕಿರಣ್ ಶೆಟ್ಟಿ ಸ್ವಾಗತಿಸಿದರು, ಯಶಸ್ವಿನಿ ವಂದಿಸಿದರು, ದೀಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…