ಮಂಗಳೂರಿನಿ0ದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ದೂರುದಾರೆಯ ಮಾಹಿತಿ ಪ್ರಕಾರ, ನಿನ್ನೆ ಮಂಗಳೂರಿನಿ0ದ ಪುತ್ತೂರಿಗೆ ಬಸ್‌ನಲ್ಲಿ ಸಂಜೆ 6:30ರ ಸುಮಾರಿಗೆ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ತಕ್ಷಣ ದೂರುದಾರರು ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ದೂರುದಾರರ ತಂದೆ ಮತ್ತು ಸಾರ್ವಜನಿಕರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಹಿಡಿದಿಟ್ಟಿದ್ದಾರೆ. ಬಂಧಿತನನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಸಂಬ0ಧ ಅ.ರ್ರ.56/2025ಕಲಂ 0 75 BNS 2023 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…