ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, 470 ಮಿಲಿಗ್ರಾಂ ಚಿನ್ನ ಹಾಗೂ 1700 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಮಧ್ಯಪ್ರದೇಶ ರಾಜ್ಯದವರಾಗಿದ್ದು, ಉಡುಪಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಅಲ್ಲದೇ ತಮ್ಮ ಸಹಚರರೊಂದಿಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಳವು ಮಾಡಿದವರಾಗಿದ್ದಾರೆ. ಇವರ ಮೇಲೆ ಮಹಾರಾಷ್ಟ್ರ ರಾಜ್ಯದಲ್ಲಿ ಸಹ ಪ್ರಕರಣಗಳು ದಾಖಲಾಗಿವೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…