24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ.
ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಮಂಗಳೂರಿನಲ್ಲಿ ಮನೆ ಬಾಡಿಗೆಗೆ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.ಮAಗಳೂರಿನಲ್ಲಿ ಮನೆ ಬಾಡಿಗೆಗೆ ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇರುತ್ತದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…