ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01-02 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ” ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ 500 ಕ್ಕೂ ಅಧಿಕ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಶಾಸಕರು, ನೀವು ಒಂದು ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾದರೆ ಮೊದಲು ಖುಷಿ ಪಡುವುದು ನಿಮ್ಮ ಹೆತ್ತವರು. ಆ ಕಾರಣಕ್ಕಾಗಿ ಆಳ್ವಾಸ್ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ಡಿಗ್ರಿ, ಡಿಪ್ಲೊಮ, ಇಂಜಿನಿಯರಿಂಗ್, ಐಟಿಐ, ಹೀಗೆ ವಿವಿಧ ವಿದ್ಯಾರ್ಹತೆಗೆ ಅನುಗುಣವಾಗಿ 5 ಸಾವಿರಕ್ಕೂ ಅಧಿಕ ಅವಕಾಶಗಳಿವೆ. ನಿಮ್ಮ ಅನುಕೂಲಕ್ಕಾಗಿ ಮಂಗಳೂರಿನಿಂದ ಬಸ್ ವ್ಯವಸ್ಥೆಯೂ ಸಹ ಇರಲಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಕಾರ್ಯಾಗಾರದಲ್ಲಿ ಉದ್ಯೋಗಾಕಾಂಕ್ಷಿ ಯುವ ಮಿತ್ರರಲ್ಲಿ ಹೊಸ ಭರವಸೆ ತುಂಬಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಆತ್ಮೀಯರಾಗಿರುವ ಶ್ರೀ ವಿವೇಕ್ ಆಳ್ವರು ಹಾಗೂ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ವಿಶೇಷ ಅಭಿನಂದನೆಗೆ ಅರ್ಹರು ಎಂದರು. ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ, ಪ್ರಾಂಶುಪಾಲರಾದ ಜಯಕರ ಭಂಡಾರಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…