ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜು. 24 ರಂದು ಸಂಜೆ ವೇಳೆ ನಡೆದಿದೆ.
ಮೃತ ಬೈಕ್ ಸವಾರನನ್ನು ರೋಧಿಲಾಲ್ ಎಂದು ಗುರುತಿಸಲಾಗಿದೆ. ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕದಲ್ಲಿ ಈ ಅಪಘಾತ ಸಂಭವಿಸಿದೆ. ಕೆರಾಡಿ ಕಡೆಯಿಂದ ಕಾರಿಬೈಲು ಕಡೆಗೆ ಬರುತ್ತಿದ್ದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದಿದ್ದಾನೆ. ಬಿದ್ದವನ ತಲೆಯ ಮೇಲೆ ಲಾರಿ ಹರಿದಾಡಿದ್ದು ಬೈಕ್ ಸವಾರ ರೋಧಿಲಾಲ್ ನ ಸ್ಥಳದಲ್ಲಿಯೇ ಪ್ರಾಣಪಕ್ಷಿ ಹಾರಿಹೋಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…