ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

WWE ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹೋಗನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ಹಲ್ಕ್ ಹೋಗನ್‌ಗೆ ಹೃದಯಾಘಾತವಾಗಿದೆ. ಕೂಡಲೇ ವೈದ್ಯಕೀಯ ತಂಡವನ್ನ ಮನೆಗೆ ಕರೆಸಲಾಗಿದೆ.

ಅಲ್ಲಿಂದ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ತಲುಪುವ ಮುನ್ನವೇ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. WWE ಇತಿಹಾಸದಲ್ಲಿ ಅತ್ಯಂತ ಪ್ರಖ್ಯಾತಿ ಪಡೆದಿದ್ದವರಲ್ಲಿ ಹೋಗನ್ ಒಬ್ಬರಾಗಿದ್ದರು. ಇದೀಗ ಅವರ ನಿಧನಕ್ಕೆ ಪ್ರಪಂಚದಾದ್ಯಂತ WWE ಅಭಿಮಾನಿಗಳು ಕಂಬನಿ ಮಿಡಿದ್ದಾರೆ.



