ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಪಿಕಪ್ ಜೀಪ್ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಯುವಕ ಸಾ*ವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ನದಿಗೆ ಬಿದ್ದು 23 ವರ್ಷದ ಶಮಂತ್ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಿಯುತ್ತಿರುವ ಮಳೆಯಿಂದ ಕಾರ್ಯಾಚರಣೆಗೂ ತೊಂದರೆಯುಂಟಾಗಿದೆ.
ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮುಳುಗು ತಜ್ಞ ಮಲ್ಪೆ ಈಶ್ವರ್ ಅವರನ್ನೂ ಕರೆಸಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಮಧ್ಯೆ ಆಘಾತಕಾರಿ ಸುದ್ದಿ ಅಂದರೆ, ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ತುಂಬಾನೇ ನೊಂದುಕೊಂಡ ತಾಯಿ, ಮನೆಯ ಹಿಂದಿನ ಕೆರೆಗೆ ಹಾರಿ ಜೀವ ಬಿಟ್ಟಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ, ಸಂಬಂಧಿಕರಲ್ಲಿ ದುಃಖ ಮತ್ತಷ್ಟು ಮುಡಿಗಟ್ಟಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…