ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ವಾಹನವೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂಟ್ವಾಳ ಮುಖ್ಯ ಕಟ್ಟಡದಿಂದ ಬಂಟ್ವಾಳ ರಸ್ತೆಗೆ ಹೋಗುತ್ತಿದ್ದ ಪುರಸಭೆಯ ಘನತ್ಯಾಜ್ಯ ವಾಹನವೊಂದು ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರ ಮುಖ, ಕಣ್ಣು ಹಾಗೂ ಎದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಈ ಅಪಘಾತದ ನಿಖರ ಕಾರಣಗಳನ್ನು ತನಿಖೆ ಮಾಡುವ ವೇಳೆ ಪುರಸಭೆಯ ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಅವಧಿ ಮುಗಿದು 2 ವರ್ಷ ಕಳೆದಿದ್ದು, ನವೀಕರಣ ಆಗದೇ ಇರುವುದು ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯ ನಿಯಾಮಾಳಿ ಪ್ರಕಾರ ಎಫ್.ಸಿ. ಮಾಡದಿರುವ ವಾಹನ ಬಳಕೆಗೆ ಯೋಗ್ಯವಲ್ಲ. ಅದು ಗುಜರಿ ವಾಹನಕ್ಕೆ ಸಮಾನವಾಗಿದೆ. ಎಫ್.ಸಿ. ಇಲ್ಲದ ಗುಜರಿ ವಾಹನವನ್ನು ರಸ್ತೆಗೆ ಇಳಿಸಿದರೆ ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ವಿಮಾ ಪರಿಹಾರಕ್ಕೆ ಪರದಾಡುವ ಸಂಕಷ್ಟ ಎದುರಾಗುತ್ತದೆ. ಈ ಮಧ್ಯೆ ಪೊಲೀಸರಿಗೆ ಒತ್ತಡ ತಂದು ಕೇಸು ದಾಖಲಿಸದಿರಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಪ್ರತಿಭಟಿಸಿದ ಪರಿಣಾಮ ಕೊನೆಗೂ ಎಫ್. ಐ. ಆರ್. ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ಬಗ್ಗೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…