ಜನ ಮನದ ನಾಡಿ ಮಿಡಿತ

Advertisement

ಸೆಂಟ್ರಲ್ ಜೈಲಿನಿಂದ ಎಸ್ಕೇಪ್ ಆದ ಖೈದಿ ಬಾವಿಯಲ್ಲಿ ಪತ್ತೆ

ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್‌ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್‌ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.

ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.

ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!